ವಿಜಯಪುರ : ಭೀಮಾತೀರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿ ಬಂದಿದ್ದು, ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರಿಗೆ ಎಂಬ ಗ್ರಾಮದಲ್ಲಿ ರೌಡಿಶೀಟರ್ ಭಿಮನಗೌಡ ಬಿರಾದರ್ (45) ಮೇಲೆ ಫೈರಿಂಗ್ ನಡೆಸಲಾಗಿದೆ. ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನಪ್ಪಿದ್ದಾನೆ.
ಭೀಮನ ಗೌಡಗೆ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಭೀಮನಗೌಡ ಬಿರಾದರ್ ತಲೆ, ಎದೆಗೆ ಗುಂಡು ತಗುಲಿದ್ದು, ಮಹದೇವ ಭೈರಗೊಂಡ ಪರಮ ಆಪ್ತನಾದ ಭೀಮನಗೌಡ ಬಿರಾದರ್ ಕಟಿಂಗ್ ಮಾಡಿಸಿಕೊಳ್ಳುವಾಗ ಕಣ್ಣಿಗೆ ಕಾರದಪುಡಿ ಎರಚಿ, ಕೃತ್ಯ ಎಸಗಿದ್ದಾರೆ. ಹಳೆ ವೈಷಮ್ಯ ಹಿನ್ನೆಲೆ ಗುಂಡಿನ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಗಾಯಗೊಂಡ ಭೀಮನಗೌಡ ವಿಜಯಪುರ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಭೀಮನಗೌಡ ಬಿರಾದರ್ ಇದೀಗ ಸಾವನಪ್ಪಿದ್ದಾನೆ.