ಕಲಬುರಗಿ : ಕಲಬುರಗಿಯಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು, ಗೆಳೆಯರ ಜೊತೆಗೆ ಎಣ್ಣೆ ಪಾರ್ಟಿ ಮಾಡಿಕೊಂಡು ಕುಳಿತಿದ್ದ ಯುವಕನ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿನಲ್ಲಿ ಯುವಕನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಯುವಕನನ್ನು ಶ್ರೀಕಾಂತ್ ಪೂಜಾರಿ ಎಂದು ಗುರುತಿಸಲಾಗಿದ್ದು, ಶ್ರೀಕಾಂತ್ ಮೇಲೆ ಫೈರಿಂಗ್ ಪರಿಣಾಮ ಎಡಕೈಗೆ ಗಂಭೀರ ಗಾಯಗಳಾಗಿದೆ.
ಯುವಕನ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾಂತಪ್ಪ, ಮಾಳಪ್ಪ ಎಂಬುವವರನ್ನು ಬಂಧಿಸಿದ್ದಾರೆ.. ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.