ರಾಮನಗರ : ಬೆಂಗಳೂರಿನ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಉತ್ತರ ರಿಕ್ಕಿ ರೈ ಮೇಲೆ ಇತ್ತೀಚಿಗೆ ಬಿಡದಿಯ ಬಳಿ ಫೈರಿಂಗ್ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೃಕ್ಕಿರೈ ಗನ್ ಮ್ಯಾನ್ ವಿಠ್ಠಲ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎನ್ನಲಾಗಿದೆ.
ಹೌದು ರಿಕ್ಕಿ ರೈ ಮೇಲೆ ಫೈರಿಂಗ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗನ್ ಮ್ಯಾನ್ ಅರೆಸ್ಟ್ ಆಗಿದ್ದು, ಬಂಧಿತ ಆರೋಪಿಯನ್ನು ರಾಮನಗರ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ರಿಕ್ಕಿ ರೈ ಗನ್ ಮ್ಯಾನ್ ವಿಠ್ಠಲ್ ಬಂಧಿತ ಆರೋಪಿಯಾಗಿದ್ದು, ಅವರನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಪ್ರಕರಣದ ಹಿನ್ನೆಲೆ?
ಬೆಂಗಳೂರಿನ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಕಿರಿಯ ಪುತ್ರ ಹಾಗೂ ಉದ್ಯಮಿ ರಿಕ್ಕಿ ರೈ ಅವರ ಮೇಲೆ ಕಳೆದ ಏಪ್ರಿಲ್ 18 ರಂದು ರಾಮನಗರದ ಬಿಡದಿ ಬಳಿ ಫೈರಿಂಗ್ ನಡೆದಿತ್ತು. ರಾತ್ರಿ 11:30ರ ಸುಮಾರಿಗೆ ಕಾರಿನಲ್ಲಿ ಬೆಂಗಳೂರಿಗೆ ಹೊರಟಿದ್ದ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ರಿಕ್ಕಿ ಮೂಗು ಹಾಗೂ ಕೈಗಳಿಗೆ ಗಾಯಗಳಾಗಿತ್ತು. ಬಳಿಕ ಅವರನ್ನು ಬೆಂಗಳೂರಿನ ಹೆಚ್ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ತನಿಖೆ ಮುಂದುವರೆಸಿದ್ದಾರೆ.