ಬಳ್ಳಾರಿ : ಬಳ್ಳಾರಿಯಲ್ಲಿ ಶನಿವಾರ ತಡರಾತ್ರಿ ಪುಂಡರು ಅಟ್ಟಹಾಸ ಮೆರೆದಿದ್ದು, ಸಿಕ್ಕ ಸಿಕ್ಕವರಿಗೆ ಕಲ್ಲು, ರಾಡ್, ಸಿಮೆಂಟ್ ಇಟ್ಟಿಗೆಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಬಳ್ಳಾರಿಯ ಬಾಪೂಜಿನಗರದ 7 ನೇ ವಾರ್ಡ್ ನಲ್ಲಿ ಕ್ಷುಲಕ ಕಾರಣಕ್ಕೆ ಮನೆಗೆ ನುಗ್ಗಿದ ಪುಂಡರು ಕಲ್ಲು, ರಾಡ್, ಸಿಮೆಂಟ್ ಇಟ್ಟಿಗೆಗಳಿಂದ ಹಲ್ಲೆ ನಡೆಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಹೆಲ್ಮೆಟ್ ಹಾಕಿಕೊಂಡ ಬಂದ ಪುಂಡರು ಮನೆ ಎದುರಿಗೆ ಇರುವ ಬೈಕ್ ಗಳನ್ನು ಪುಡಿ ಪುಡಿ ಮಾಡಿ ಪರಾರಿಯಾಗಿದ್ದಾರೆ. ಸದ್ಯ ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.