ಶಿವಮೊಗ್ಗ : ಶಿವಮೊಗ್ಗದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಕೇಳಿದ್ದು, ಶಿವಮೊಗ್ಗದಲ್ಲಿ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ನಡೆದಿದೆ.
ರೌಡಿಶೀಟರ್ ಹಬೀಬ್ ವುಲ್ಲಾ ಅಲಿಯಾಸ್ ಅಮ್ಮು ಅವರನ್ನು ಬಂಧಿಸುವ ವೇಳೆ ಪೊಲೀಸರು ತಮ್ಮ ರಕ್ಷಣೆಗಾಗಿ ಹಬೀಬ್ ವುಲ್ಲಾ ಕಾಲಿಗೆ ಗುಂಡು ಹಾರಿಸಿದ್ದಾರೆ. ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್ ಅವರು ಆತ್ಮರಕ್ಷಣೆಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಶಿವಮೊಗ್ಗದ ತುಂಗಾನಗರ ಠಾಣೆಯ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಜಯಪ್ಪ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.