ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಜಾಮೀನು ಪ್ರಶ್ನಿಸಿ ಎಸ್ ಐಟಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಕೋರ್ಟ್ ಗೆ ಹಾಜರಾಗುವಂತೆ ಹೆಚ್.ಡಿ. ರೇವಣ್ಣಗೆ ನೋಟಿಸ್ ನೀಡಲಾಗಿದೆ.
ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಅವರಿಎ ಜಾಮೀನು ರದ್ದು ಮಾಡುವಂತೆ ಕೋರಿ ಎಸ್ ಐಟಿ ಅರ್ಜಿ ಸಲ್ಲಿಸಿದ್ದು, ಇದಕೆ ಪ್ರತಿಕ್ರಿಯೆ ನೀಡಿರುವ ಕೋರ್ಟ್ ಹೆಚ್.ಡಿ. ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡಿದ ಐದು ದಿನದೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಕೋರ್ಟ್ ತಿಳಿಸಿದೆ.