ಚಿಕ್ಕಮಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇದ್ದರೂ ಕೂಡ ಅಕ್ರಮವಾಗಿ ಹಣ ಸಾಗಾಟ ಹಾಗೂ ಚಿನ್ನ ಸಾಗಾಣೆ ಮಾಡುವುದು ಕಂಡುಬರುತ್ತದೆ. ಇದೀಗ ಚಿಕ್ಕಮಗಳೂರಿನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಅರ್ಧ ಕೆಜಿ ಚಿನ್ನ ಸಾಗಿಸುತ್ತಿದ್ದು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚಿನ್ನದ ಸರ ಸೇರಿ ಉಂಗುರಗಳನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಚಿನ್ನ ಸಾಗಿಸುತ್ತಿದ್ದ ಓರ್ವ ಪ್ರಯಾಣಿಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಬಸ್ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ನಡೆಸಲಾಗಿತ್ತು. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.