ಮಂಡ್ಯ: ಲೋಕಸಭೆ ಚುನಾವಣೆಗೂ ಮುನ್ನ ಮಂಡ್ಯ ಜಿಲ್ಲೆಯಲ್ಲಿ ಹನುಮಧ್ವಜ ತೆರವುಗೊಳಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಫೆಬ್ರವರಿ 7 ರಂದು ಮಂಡ್ಯಗೆ ಕರೆ ನೀಡಲಾಗಿದೆ.
ಸಮಾನ ಮನಸ್ಕಾರ ವೇದಿಕೆಯಿಂದ ಬಂದ್‌ಗೆ ಕರೆ ನೀಡಲಾಗಿದ್ದು, ಜಿಲ್ಲೆಯಲ್ಲಿ ಅಶಾಂತಿ ಎಬ್ಬಿಸುವವರ ವಿರುದ್ದ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಈ ನಡುವೆ ಮಂಡ್ಯದ ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಲಾಗಿದ್ದು ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ಕ್ರಮ ಭಾರೀ ಸಂಘರ್ಷಕ್ಕೆ ಕಾರಣವಾಗಿದ್ದು, ಮಂಡ್ಯದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿದೆ. ಮಂಡ್ಯ ಜಿಲ್ಲೆ ಕೆರಗೋಡು ಎಂಬಲ್ಲಿ ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು 108 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಹನುಮ ಧ್ವಜ ವನ್ನು ಹಾರಿಸಿದ್ದರು. ಈ ಧ್ವಜವನ್ನು ತೆರವುಗೊಳಿಸಲಾಗಿದ್ದು, ಈಗ ಇದು ರಾಜಕೀಯ ನಾಯಕರುಗಳ ಮಾತಿನ ಸಮರಕ್ಕೆ ಕಾರಣವಾಗಿದೆ.