ಬೆಳಗಾವಿ : ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಿಗೆ ಆಶ್ರಯ ಹಾಗೂ ಆರ್ಥಿಕ ಸಹಾಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವರಾದಂತಹ ವೀರಕುಮಾರ ಪಾಟೀಲ ಪುತ್ರ ಪ್ರೀತಮ್ ನನ್ನು ಪುಣೆ ಪೊಲೀಸರು ಅರೆಸ್ಟ್ ಮಾಡಲಾಗಿದೆ.
ವೈಷ್ಣವಿ ಹಗವಣೆ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ವೈಷ್ಣವಿ ಮಾವ ರಾಜೇಂದ್ರ, ಮೈದುನ ಸುಶೀಲ್‌ಗೆ ಆಶ್ರಯ ಹಾಗೂ ಆರ್ಥಿಕ ಸಹಾಯ ಆರೋಪದಡಿ ಪ್ರೀತಮ್‌ನನ್ನು ಬಂಧಿಸಲಾಗಿದೆ.ಸಚಿವ ಸತೀಶ ಜಾರಕಿಹೊಳಿ ಆಪ್ತ ಹಾಗೂ ಮಾಜಿ ಸಚಿವ ವೀರಕುಮಾರ ಪಾಟೀಲ ಅವರ ಪುತ್ರ ಪ್ರೀತಮ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.