Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

BREAKING : ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಕೂಡ ಔಟ್ | Hardik Pandya

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್ : ಮರು ಅರ್ಜಿ ಸ್ವೀಕರಿಸಲು ರಾಜ್ಯ ಸರ್ಕಾರ ಚಿಂತನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಕೂಡ ಔಟ್ | Hardik Pandya
INDIA

BREAKING : ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಕೂಡ ಔಟ್ | Hardik Pandya

By kannadanewsnow57

ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ 2027ರ ಏಕದಿನ ವಿಶ್ವಕಪ್‌ ಸರಣಿಯ ಸಿದ್ಧತೆಯ ಭಾಗವಾಗಿರುವ, ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೂ ಮುನ್ನ ಭಾರತ ತಂಡಕ್ಕೆ ಮತ್ತೊಂದು ಭಾರಿ ಆಘಾತ ಎದುರಾಗಿದೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಬೆನ್ನಲ್ಲೇ, ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಗಾಯದ ಸಮಸ್ಯೆಯಿಂದಾಗಿ ಈ ಸರಣಿಯಿಂದ ಹೊರಬಿದ್ದಿದ್ದಾರೆ.

ಬಿಸಿಸಿಐ (BCCI) ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ಹಾರ್ದಿಕ್ ಪಾಂಡ್ಯ ಸದ್ಯ ಕ್ವಾಡ್ರಿಸೆಪ್ಸ್ (ತೊಡೆಯ ಸ್ನಾಯು) ಗಾಯದಿಂದ ಬಳಲುತ್ತಿದ್ದು, ಇದರಿಂದ ಗುಣಮುಖರಾಗಲು ಕನಿಷ್ಠ ಮೂರು ವಾರಗಳ ವಿಶ್ರಾಂತಿ ಅಗತ್ಯವಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುತ್ತಿದ್ದಾಗ ಪಾಂಡ್ಯ ಬೆನ್ನುನೋವಿಗೆ ತುತ್ತಾಗಿದ್ದರು. ಈ ಕಾರಣದಿಂದಾಗಿ ಅವರು ಲೀಗ್ ಹಂತದ ಕೊನೆಯ ಪಂದ್ಯಗಳಿಂದ ಹೊರಗುಳಿದು, ಟೂರ್ನಿಯಲ್ಲಿ ಕೇವಲ 10 ಪಂದ್ಯಗಳನ್ನು ಮಾತ್ರ ಆಡಿದ್ದರು.

ಬೆನ್ನುನೋವಿನ ಸಮಸ್ಯೆಯಿಂದ ಚೇತರಿಸಿಕೊಂಡು ಫಿಟ್ನೆಸ್ ಪ್ರಮಾಣಪತ್ರ ಪಡೆಯಲು ಪಾಂಡ್ಯ ಬೆಂಗಳೂರಿನ ಬಿಸಿಸಿಐನ ‘ಸೆಂಟರ್ ಆಫ್ ಎಕ್ಸಲೆನ್ಸ್’ (CoE) ಗೆ ಆಗಮಿಸಿದ್ದರು. ಆದರೆ, ಅಲ್ಲಿ ನಡೆದ ಫಿಟ್ನೆಸ್ ಪರೀಕ್ಷೆಯ ವೇಳೆ ಅವರು ಸತತ 10 ಓವರ್‌ ಗಳ ಬೌಲಿಂಗ್ ಕೋಟಾವನ್ನು ಪೂರ್ಣಗೊಳಿಸಿದ ಪರಿಣಾಮವಾಗಿ ಈ ಹೊಸ ಗಾಯದ ಸಮಸ್ಯೆ (ಕ್ವಾಡ್ರಿಸೆಪ್ಸ್ ಗಾಯ) ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

“ಅವರು ಚೇತರಿಸಿಕೊಳ್ಳಲು ಮೂರು ವಾರಗಳ ಸಮಯ ಬೇಕಿರುವುದರಿಂದ, ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಆಡುವ ಯಾವುದೇ ಸಾಧ್ಯತೆಗಳಿಲ್ಲ. ಅವರ ಪುನಶ್ಚೇತನ (Rehabilitation) ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ” ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಹಿರಿಯ ಆಟಗಾರರ ಗಾಯದ ಸಮಸ್ಯೆ:

ಹಾರ್ದಿಕ್ ಪಾಂಡ್ಯ ಅವರ ಈ ಗಾಯವು ಭಾರತ ತಂಡದ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಐಪಿಎಲ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಬ್ಯಾಟಿಂಗ್ ಮಾಡುವಾಗ ಹ್ಯಾಮ್‌ಸ್ಟ್ರಿಂಗ್ ಗಾಯಕ್ಕೆ ಒಳಗಾಗಿದ್ದ ವಿರಾಟ್ ಕೊಹ್ಲಿ ಈಗಾಗಲೇ ಸರಣಿಯಿಂದ ಹೊರಗುಳಿದಿದ್ದಾರೆ. ಇದರೊಂದಿಗೆ, ಕಳೆದ ಕೆಲವು ತಿಂಗಳುಗಳಿಂದ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಲಭ್ಯತೆಯ ಮೇಲೆಯೂ ಸದ್ಯ ತೂಗುಗತ್ತಿ ನೇತಾಡುತ್ತಿದೆ.

ಪ್ರಸ್ತುತ ವಿರಾಟ್ ಕೊಹ್ಲಿ ಅವರ ಜಾಗಕ್ಕೆ ಯಶಸ್ವಿ ಜೈಸ್ವಾಲ್ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿದ್ದು, ಹಾರ್ದಿಕ್ ಪಾಂಡ್ಯ ಅವರ ಬದಲಿ ಆಟಗಾರ ಯಾರೆಂಬುದನ್ನು ಬಿಸಿಸಿಐ ಇನ್ನು ಅಧಿಕೃತವಾಗಿ ಪ್ರಕಟಿಸಬೇಕಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಏಕದಿನ ಪಂದ್ಯವು ಶನಿವಾರ ಧರ್ಮಶಾಲಾದಲ್ಲಿ ಆರಂಭವಾಗಲಿದ್ದು, ಉಳಿದ ಎರಡು ಪಂದ್ಯಗಳು ಜೂನ್ 17 ಮತ್ತು 20 ರಂದು ಕ್ರಮವಾಗಿ ಲಕ್ನೋ ಮತ್ತು ಚೆನ್ನೈನಲ್ಲಿ ನಡೆಯಲಿವೆ.

BREAKING: Hardik Pandya also out of ODI series against Afghanistan after Virat Kohli | Hardik Pandya
Share. Facebook Twitter LinkedIn WhatsApp Email

Related Posts

BREAKING : ಕೇರಳದಲ್ಲಿ ‘ಶಿಗೆಲ್ಲ ವೈರಸ್’ ಗೆ 4 ವರ್ಷದ ಹೆಣ್ಣು ಮಗು ಬಲಿ : 21 ಜನರಲ್ಲಿ ಸೋಂಕು ದೃಢ | Shigella Virus

1 Min Read

Fact Check: ​ಪ್ಲಾಸ್ಟಿಕ್ ನೋಟುಗಳ ಜಾರಿ ಎಂಬುದು ಸುಳ್ಳು ಸುದ್ದಿ: RBI ಮತ್ತು PIB ಸ್ಪಷ್ಟನೆ

1 Min Read

Rah-Veer scheme : ರಸ್ತೆ ಅಪಘಾತ ಸಂತ್ರಸ್ತರ ನೆರವಿಗೆ ಬಂದರೆ ₹25,000 ಬಹುಮಾನ: ‘ರಹಾ-ವೀರ್’ ಯೋಜನೆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read
Recent News

BREAKING : ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

BREAKING : ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಕೂಡ ಔಟ್ | Hardik Pandya

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್ : ಮರು ಅರ್ಜಿ ಸ್ವೀಕರಿಸಲು ರಾಜ್ಯ ಸರ್ಕಾರ ಚಿಂತನೆ!

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘DUPLICATE TC ’ ಪಡೆಯಲು ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ಮಾಹಿತಿ

State News
KARNATAKA

BREAKING : ಬಳ್ಳಾರಿ ಗಡಿಯಲ್ಲಿ ಲಾರಿ-ಟ್ಯಾಂಕರ್ ಮಧ್ಯ ಭೀಕರ ಅಪಘಾತ : ಚಾಲಕ ಸಜೀವ ದಹನ!

By ಸುರೇಶ್‌ KARNATAKA 1 Min Read

ಬಳ್ಳಾರಿ : ಬಳ್ಳಾರಿ ಗಡಿ ಭಾಗದಲ್ಲಿ ಲಾರಿ ಮತ್ತು ಟ್ಯಾಂಕರ್ ನಡುವೆ ಭೀಕರವಾದ ಅಪಘಾತ ಸಂಭವಿಸಿದ್ದು, ಬೆಂಕಿಯಿಂದ ಎರಡು ವಾಹನಗಳು…

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್ : ಮರು ಅರ್ಜಿ ಸ್ವೀಕರಿಸಲು ರಾಜ್ಯ ಸರ್ಕಾರ ಚಿಂತನೆ!

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘DUPLICATE TC ’ ಪಡೆಯಲು ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ಮಾಹಿತಿ

ಮಳೆಗಾಲದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಭೀತಿ: ಜ್ವರದಿಂದ ಸುರಕ್ಷಿತವಾಗಿರಲು ಇಲ್ಲಿದೆ ಸರಳ ಮತ್ತು ಪ್ರಮುಖ ಸಲಹೆಗಳು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.