ಬೆಂಗಳೂರು: 69ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕನ್ನಡದ ಬಗ್ಗೆ ಅವಹೇಳನ ಮಾಡಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಕನ್ನಡಕ್ಕೆ ಅವಹೇಳನ ಮಾಡುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ತೆರಿಗೆ ಹಂಚಿಕೆಯಲ್ಲಿ ಇಂದು ಕರ್ನಾಟಕಕ್ಕೆ ಅನ್ಯಾಯವಾಗಿದೆ. ಮಹಾರಾಷ್ಟ್ರದ ನಂತರ ನಾವು ಎರಡನೇ ಸ್ಥಾನದಲ್ಲಿದೆ, ನಾವು 4,00,000 ಕೋಟಿ ರೂಪಾಯಿಗಳನ್ನು ತೆರಿಗೆ ರೂಪದಲ್ಲಿ ನೀಡುತ್ತಿದ್ದೇವೆ ಆದರೆ ನಮಗೆ ಪ್ರತಿಫಲ ಕಡಿಮೆಯಾಗಿದೆ. ಸಂಸದರು ಈ ವಿಷಯವನ್ನು ಇಲ್ಲಿ ಪ್ರಸ್ತಾಪಿಸಬೇಕು. ಕೇಂದ್ರವನ್ನು ನಾವು ನ್ಯಾಯ ಕೇಳಿದೆವು ಆದರೆ ನಮ್ಮ ಹಕ್ಕು ನಮಗೆ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.
Bengaluru | Karnataka CM Siddaramaiah says "Today Karnataka is met with an injustice in the tax devolution. We are second after Maharashtra. We are contributing Rs 4,00,000 crores in the form of tax but we are getting less in return. MPs must raise this issue at the Center. We… pic.twitter.com/3GKKyg12mx
— ANI (@ANI) November 1, 2024