ನವದೆಹಲಿ : ಹರಿಯಾಣ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ತಿ ವಿನೇಶ್ ಪೋಗಟ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ವಿನೇಶ್ ಫೋಗಲ್ ಮೊದಲ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿರುವುದು ಗಮನಾರ್ಹ. ಕಾಂಗ್ರೆಸ್ ಪಕ್ಷ ಸೋತರೂ ಹರಿಯಾಣ ಚುನಾವಣೆಯಲ್ಲಿ ಗೆದ್ದಿರುವುದು ಗಮನಾರ್ಹ. ಫಲಿತಾಂಶದಲ್ಲಿ ವಿನೇಶ್ ಫೋಗಟ್ ಮೊದಲ ಸುತ್ತಿನಿಂದ ಮುನ್ನಡೆ ಸಾಧಿಸಿದ್ದಾರೆ. ಮಧ್ಯದಲ್ಲಿ ಕೊಂಚ ಹಿಂದೆ ಬಿದ್ದ ವಿನೇಶ್ ಕೊನೆಯ ಸುತ್ತಿನವರೆಗೂ ಮುನ್ನಡೆ ಕಾಯ್ದುಕೊಂಡರು. ಬಿಜೆಪಿ ಪರವಾಗಿ ಯೋಗೇಶ್ ಬಜರಂಗಿ ಸ್ಪರ್ಧಿಸಿದರೆ, ವಿನೇಶ್ ಫೋಗಟ್ ಸುಲಭವಾಗಿ ಗೆದ್ದರು.
ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 48 ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು, ಬಿಜೆಪಿ 36 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.
ಜಮ್ಮುಕಾಶ್ಮೀರದಲ್ಲಿ ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, 51 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ. ಪಿಡಿಪಿ 4 ಕ್ಷೇತ್ರಗಳಲ್ಲಿ, ಇತರರು 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.