ನವದೆಹಲಿ : ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ.ಹರಿಯಾಣದಲ್ಲಿ ಕಾಂಗ್ರೆಸ್ ಸರಳ ಬಹುಮತ್ತದತ್ತ ಮುನ್ನಡೆ ಸಾಧಿಸಿದೆ.
ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 48 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಬಿಜೆಪಿ 23 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಹರಿಯಾಣದ ಎಲ್ಲಾ 90 ಅಸೆಂಬ್ಲಿ ಸ್ಥಾನಗಳಿಗೆ ಅಕ್ಟೋಬರ್ 5 ರಂದು ಮತದಾನ ನಡೆಯಿತು. ಭಾರತೀಯ ಜನತಾ ಪಕ್ಷ (ಬಿಜೆಪಿ), ಕಾಂಗ್ರೆಸ್, ಜನನಾಯಕ್ ಜನತಾ ಪಕ್ಷ (ಜೆಜೆಪಿ), ಮತ್ತು ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್ಎಲ್ಡಿ) ಹರಿಯಾಣದಲ್ಲಿ ಪ್ರಮುಖ ಪಕ್ಷಗಳಾಗಿವೆ. ಜೆಜೆಪಿಯು ಆಜಾದ್ ಸಮಾಜ ಪಕ್ಷದೊಂದಿಗೆ (ಕಾನ್ಶಿ ರಾಮ್) ಮೈತ್ರಿ ಮಾಡಿಕೊಂಡಿದ್ದರೆ, ಐಎನ್ಎಲ್ಡಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಜೊತೆ ಮೈತ್ರಿ ಮಾಡಿಕೊಂಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಸ್ಥಾನಗಳಿದ್ದು, ಅದರಲ್ಲಿ 47 ಕಾಶ್ಮೀರದಲ್ಲಿ ಮತ್ತು 43 ಜಮ್ಮುವಿನಲ್ಲಿವೆ. ಇಲ್ಲಿ ಮೊದಲ ಹಂತದ ಮತದಾನ ಸೆಪ್ಟೆಂಬರ್ 18 ರಂದು ಮತ್ತು ಎರಡನೇ ಹಂತದ ಮತದಾನ ಸೆಪ್ಟೆಂಬರ್ 25 ರಂದು ನಡೆಯಿತು. ಆರ್ಟಿಕಲ್ 370 ರದ್ದಾದ ನಂತರ ಇಲ್ಲಿ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ. ಅಕ್ಟೋಬರ್ 6 ರಂದು ಸಮೀಕ್ಷೆಗಳು ಬಿಡುಗಡೆಯಾಗಿದ್ದು, ಇಲ್ಲಿ ಎನ್ಸಿ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆ. ಆದರೆ, ಇಲ್ಲಿ ಯಾವ ಪಕ್ಷ ಸಿಎಂ ಆಗಲಿದೆ ಎಂಬುದು ಕೂಡ ಕೆಲವೇ ಗಂಟೆಗಳಲ್ಲಿ ಸ್ಪಷ್ಟವಾಗಲಿದೆ.