ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಹೊಳೆನರಸಿಪುರದಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಅರ್ಜಿ ಕುರಿತು ವಿಚಾರ ನಡೆಸಿದ ಹೈಕೋರ್ಟ್ ಎರಡು ವಾರಗಳ ಕಾಲ ವಿಚಾರಣೆ ಮುಂದೂಡಿದೆ.
ಇಂದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ಸಲ್ಲಿಸಿದ ಗ್ರಾಮೀಣ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಒಂದು ಪ್ರಕರಣದಲ್ಲಿ ಮಾತ್ರ ಪ್ರಜ್ವಲ್ ಅವರನ್ನು ಪೊಲೀಸರು ಬಂಧೀಸಿದ್ದಾರೆ. ಉಳಿದ ಕೇಸ್ ಗಳಲ್ಲಿ ಬಾಡಿ ವಾರೆಂಟ್ ಮೂಲಕ ಕಸ್ಟಡಿಗೆ ಪಡೆದಿದ್ದರು. ಹೀಗಾಗಿ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ಪರಿಗಣಿಸಲು ಮನವಿ ಮಾಡಿದ್ದಾರೆ.
ಜಾಮೀನು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಇದೀಗ SIT ಗೆ ಹೈಕೋರ್ಟ್ ಸೂಚನೆ ನೀಡಿದೆ. ತನಿಖೆ ನಡೆಯಲಿ ಶೀಘ್ರ ವಿಚಾರಣೆ ಅಗತ್ಯವಿಲ್ಲ ಎಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದ್ದು,ಜಾಮೀನು ಅರ್ಜಿ ವಿಚಾರಣೆ ಎರಡು ವಾರ ಮುಂದೂಡಿದ್ದಾರೆ ಎಂದು ತಿಳಿಬಂದಿದೆ.
ಹೌದು ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಕೋಟಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಹೊಳೆನರಸೀಪುರ ಪ್ರಕರಣದಲ್ಲಿ ಇದೀಗ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಅಲ್ಲದೆ ಮತ್ತೊಂದು ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಇತರೆ ಮೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅಲ್ಲದೆ ಅಸಹಜ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಸಹೋದರ ಹಾಗೂ ಎಂಎಲ್ಸಿ ಆಗಿರುವಂತಹ ಸೂರಜ್ ರೇವಣ್ಣ ಕೂಡ ಅದೇ ಜೈಲಿನಲ್ಲಿ ಇದ್ದಾರೆ. ಸದ್ಯ ಅತ್ಯಾಚಾರಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.