ಬೆಂಗಳೂರು : ಮೈಸೂರು ಕೆ. ಆರ್ ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನಿನ ಷರತ್ತಿನಲ್ಲಿನ ಸಡಿಲಿಕೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಾರ್ಚ್ 10 ರಂದು ವಿಚಾರಣೆ ಮುಂದೂಡಿ ಆದೇಶ ಹೊರಡಿಸಿತು.
ಈ ವೇಳೆ ಭವಾನಿ ರೇವಣ್ಣ ಪರವಾಗಿ ಹಿರಿಯ ವಕೀಲ ಸಂದೇಶ್ ಚೌಟ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಾಗ ಈ ನ್ಯಾಯಾಲಯವು ವಿಧಿಸಿರುವ ಷರತ್ತಿನಿಂದಾಗಿ ಭವಾನಿ ಅವರು ಮಂಡ್ಯ ಅಥವಾ ಮೈಸೂರಿಗೆ ಪ್ರಯಾಣಿಸಲಾಗುತ್ತಿಲ್ಲ. ತುರ್ತಿನ ಪರಿಸ್ಥಿತಿ ಇರುವುದರಿಂದ ಅರ್ಜಿ ವಿಚಾರಣೆ ನಡೆಸಬೇಕುಎಂದು ಮನವಿ ಮಾಡಿದರು.
ಈ ವೇಳೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಕಾಲಾವಕಾಶ ನೀಡಿದೆ.ಇದನ್ನು ಆಲಿಸಿದ ಪೀಠವು ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲಿ, ಮಾರ್ಚ್ 10ರಂದು ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ವಿಚಾರಣೆ ಮುಂದೂಡಿತು.2024ರ ಜೂನ್ 7ರಂದು ಆರು ಷರತ್ತುಗಳನ್ನು ವಿಧಿಸಿ ಹೈಕೋರ್ಟ್, ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.