ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರನ ಪರವಾಗಿ ಹೈಕೋರ್ಟ್ ಗೆ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದರು.ಇದೀಗ ಭವಾನಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಇದೀಗ ನ್ಯಾ. ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿದೆ.
ಹೌದು ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುತ್ರನ ಪರವಾಗಿ ಸಲ್ಲಿಸಿದ್ದ ಭವಾನಿ ರೇವಣ್ಣ ಅರ್ಜಿ ಇದೀಗ ವಜಾಗೊಳಿಸಲಾಗಿದೆ. ಹೊಸ ವಕೀಲರ ನೇಮಕಕ್ಕೆ ಭವಾನಿ ರೇವಣ್ಣ ಕಾಲಾವಕಾಶ ಕೋರಿ ಹೈಕೋರ್ಟ್ ಗೆ 7 ದಿನಗಳ ಕಾಲ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು. ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಗೆ ಎಸ್‌ಪಿಪಿ ಪ್ರೊ.ರವಿವರ್ಮ ಕುಮಾರ್ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದರು.
ಈ ವೇಳೆ ನ್ಯಾ.ಎಸ್ ವಿಶ್ವದಿತ್ ಶೆಟ್ಟಿ ಅವರಿಂದ ಹೈಕೋರ್ಟ್ ಪೀಠ ಭವಾನಿ ರೇವಣ್ಣ ಅವರು ಸಲ್ಲಿಸಿದ ಅರ್ಜಿಯನ್ನು ವಜಾ ಗೊಳಿಸಿ ಆದೇಶಿಸಿದೆ. ಹೊಸ ವಕೀಲರ ನೇಮಕಕ್ಕೆ ಕನಿಷ್ಟ 7 ದಿನ ಕಾಲಾವಕಾಶಕ್ಕೆ ಭವಾನಿ ರೇವಣ್ಣ ಮನವಿ ಮಾಡಿದ್ದರು. ಎರಡು ಸಾವಿರಕ್ಕೂ ಹೆಚ್ಚಿನ ದಾಖಲೆಗಳನ್ನು ವಕೀಲರು ಪರಿಶೀಲಿಸಬೇಕು.ಆದರೆ ಸೂಕ್ತ ವಕೀಲರು ಸಿಗುತ್ತಿಲ್ಲವಾದ್ದರಿಂದ ಸ್ವಲ್ಪ ಸಮಯ ಬೇಕು. ಭವಾನಿ ರೇವಣ್ಣ ಪರ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ವಾದ ಮಂಡಿಸಿದ್ದರು.
ಭವಾನಿ ಪರ ವಕೀಲರ ವಾದಕ್ಕೆ ಎಸ್ ಪಿಪಿ ಪ್ರೊ. ರವಿವರ್ಮ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭವಾನಿ ರೇವಣ್ಣ ಸ್ವತಃ ಆರೋಪಿ. ಈ ಕೇಸ್ ಗೆ 3ನೇ ವ್ಯಕ್ತಿ. ಇಂದು ಸಾಕ್ಷಿಯ ಹೇಳಿಕೆ ದಾಖಲಾಗಬಾರದೆಂದು ಡ್ರಾಮಾ ಮಾಡುತ್ತಿದ್ದಾರೆ. ಈ ರೀತಿಯ ಅರ್ಜಿಗಳನ್ನು ಸಲ್ಲಿಸಿ ಕೋರ್ಟ್ ಗೆ ವಂಚಿಸುತ್ತಿದ್ದಾರೆ. ಹೀಗಾಗಿ ಭವಾನಿ ರೇವಣ್ಣ ವಿರುದ್ಧ ನ್ಯಾಯಾಂಗ ನಿಂದನೆ ದಾಖಲಿಸಬೇಕೆಂದು ಮನವಿ ಮಾಡಿದ್ದಾರೆ.