ಬೆಂಗಳೂರು : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದುಕೋರಿ ಸಿಟಿ ರವಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಪ್ರಕರಣದ ತನಿಖೆಗೆ ನೀಡಿದ ತಡೆಯಾಜ್ಞೆಯನ್ನು ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಹೌದು ಸದನದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಎಂಎಲ್ಸಿ ಸಿಟಿ ರವಿ ಅವಹೇಳನಕಾರಿ ಪದ ಬಳಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಂಎಲ್ಸಿ ಸಿಟಿ ರವಿ ಪ್ರಕರಣದ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದರು. ವಿಚಾರಣೆ ವೇಳೆ ಸಿಟಿ ರವಿ ಪರವಾಗಿ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಸದನದಲ್ಲಿ ಆಡಿದ ಮಾತುಗಳಿಗೆ ರಕ್ಷಣೆ ಇದೆ.ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಲಾಯಿತು.ಓರ್ವ ಮಹಿಳಾ ಸಚಿವೆಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಗೌರವವಿದೆ ಎಂದು MLC ಸಿಟಿ ರವಿ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು.
ಸದನ ಮುಂದೂಡಿದ ಬಳಿಕ ಆಡಿದ ಮಾತಿಗೆ ರಕ್ಷಣೆ ಇಲ್ಲ ಎಂದು ಸರ್ಕಾರದ ಪರ ಎಸ್ ಪಿ ಬೆಳ್ಳಿಯಪ್ಪ ಇದೆ ವೇಳೆ ವಾದಿಸಿದರು. ಅಕ್ಷೇಪಣೆ ಸಲ್ಲಿಸಲು ಲಕ್ಷ್ಮಿ ಹೆಬ್ಬಾಳ್ಕರ್ ಪರ ವಕೀಲರು ಕಾಲಾವಕಾಶ ಕೋರಿದರು. ಇದೆ ವೇಳೆ ಹೈಕೋರ್ಟ್ ಏಕ ಸದಸ್ಪೀಠ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ಮುಂದೂಡಿತು. ಅಲ್ಲದೆ ತನಿಖೆಗೆ ನೀಡಿದ ತಡೆಯಜ್ಞೆಯನ್ನು ವಿಸ್ತರಿಸಿ ಆದೇಶ ಹೊರಡಿಸಿತು.