ಬೆಂಗಳೂರು : ಕೆ.ಆರ್.ನಗರದ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಭವಾನಿ ರೇವಣ್ಣ ೮೫ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ ಎಂದು ಭವಾನಿ ರೇವಣ್ಣೆಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ; ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಮೇಲಿನ ಕಾಯ್ದಿರಿಸಿದ ಆದೇಶವನ್ನು ಹೈಕೋರ್ಟ್ ಇಂದು ಪ್ರಕಟಿಸಿದೆ.
ಏನಿದು ಪ್ರಕರಣ?
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.