ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದ ಕೇಸ್ ಗೆ ಹೈಕೋರ್ಟ್ ತಡೆ ನೀಡಿದೆ.
ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ನವಲಗುಂದ ಠಾಣೆಯಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಸಚಿವ ಜಮೀರ್ ಅಹ್ಮದ್ ವಿರುದ್ಧ ಸಲ್ಲಿಸಲಾಗಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
ಜಮೀರ್ ಅಹ್ಮದ್ ಆಯ್ಕೆ ಪ್ರಶ್ನಿಸಿ ಅವರದ್ದೇ ಕ್ಷೇತ್ರದ ಮತದಾರರೊಬ್ಬರು ಅರ್ಜಿ ಸಲ್ಲಿಸಿದ್ದರು. ಇದೀಗ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಜಮೀರ್ ಅಹ್ಮದ್ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿದೆ.