ಬೆಂಗಳೂರು : ಬೆಳಗಾವಿಯ ಸುವರ್ಣಸೌಧದ ಬಳಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಇತ್ತೀಚಿಗೆ ಪಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಂಚಮಸಾಲಿ ಸಮುದಾಯದ ಶ್ರೀಗಳಾದ ಜಯ ಮೃತ್ಯುಂಜಯ ಸ್ವಾಮೀಜಿಯವರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದರು. ಇಂದು ಹೈಕೋರ್ಟ್ ನಲ್ಲಿ ನಿವೃತ್ತ ನ್ಯಾಯಮೂರ್ತಿಗಳು ಈ ಒಂದು ಅರ್ಜಿ ವಿಚಾರಣೆ ನಡೆಸಿ ರಾಜ್ಯ ಸರ್ಕಾರಕ್ಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುವಂತೆ ಆದೇಶ ನೀಡಿದೆ.
ಹೌದು ಪ್ರಕರಣ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆಗೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಕಾಲಮಿತಿಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶ ನೀಡಿದೆ. ಸುವರ್ಣ ಸೌಧದ ಬಳಿ ಪ್ರತಿಭಟನೆ ನಡೆಸುವಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಬಸವ ಜಯಂತಿಯ ಶ್ರೀ ಮತಿತರರು ಈ ಒಂದು ಘಟನೆಗೆ ಸಂಬಂಧಿಸಿದಂತೆ ರಿಟ್ ಅರ್ಜಿ ಸಲ್ಲಿಸಿದ್ದರು.
ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ದುರುದ್ದೇಶಪೂರಿತವಾಗಿ ಪೊಲೀಸರು ಲಾಠಿಚಾರ್ಜ್ ನಡೆಸಲಾಗಿದೆ ಎಂದು ವಾದ ಮಂಡಿಸಿದ್ದರು. ಹೋರಾಟಗಾರರ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಿಗೆ ವಾದಿಸಿದ್ದರು. ಇದೀಗ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸುವ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.