ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ, ವಿಚಾರಣೆಯನ್ನು ಎದುರಿಸಿದ್ದ ವಕೀಲೆ ಜೀವ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಒಂದು ಪ್ರಕರಣದ ತನಿಖೆಗೆ ಹೈಕೋರ್ಟ್ ಎಸ್ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.
ಪ್ರಕರಣದ ಕುರಿತಂತೆ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು, ಸಿಬಿಐ ತನಿಖೆಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ಎಸ್ಐಟಿ ರಚಿಸಿ ಆದೇಶ ಹೊರಡಿಸಿದ್ದಾರೆ. SIT ತಂಡದಲ್ಲಿ ಸಿಬಿಐ ಎಸ್ಪಿ ವಿನಾಯಕ್ ವರ್ಮ, ಐಪಿಎಸ್ ಅಕ್ಷಯ್ ಮಜ್ಲಿ, ಎಸ್ಪಿ ನಿಶಾ ಜೇಮ್ಸ್ ಎಸ್‌ಐಟಿ ಹೊಂದಿರಲಿದೆ. ಅಲ್ಲದೇ ಈ ಪೈಕಿ ಇಬ್ಬರು ಎಸ್ಪಿಗಳಿದ್ದಾರೆ.
ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಕೀಲರ ಸಂಘವು ಈ ಒಂದು ಪ್ರಕರಣವನ್ನು ಸಿಬಿಐಗೆ ತನಿಖೆ ವಹಿಸುವಂತೆ ಕೋರಿ ಅರ್ಜಿ ಸಲ್ಲಿಸಿತ್ತು. ವಿಚಾರಣೆಯ ವೇಳೆ ಹೈ ಕೋರ್ಟ್ ಸಿಬಿಐ ತನಿಖೆ ಕೋರಿದ ಅರ್ಜಿಯನ್ನು ವಜಾಗೊಳಿಸಿ ಎಸ್ಐಟಿ ತನಿಖೆ ರಚಿಸಿ ಆದೇಶಿಸಿದೆ.