ನವದೆಹಲಿ : ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳ ಪೂಜೆಗೆ ಅವಕಾಶ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಲಯದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತೀರ್ಪನ್ನ ಅಲಹಾಬಾದ್ ಹೈಕೋರ್ಟ್ ಗುರುವಾರ ಕಾಯ್ದಿರಿಸಿದೆ.
ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯದ ಪಕ್ಕದ ಮಸೀದಿಯ ವ್ಯವಹಾರಗಳನ್ನ ನೋಡಿಕೊಳ್ಳುವ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಯು ಸಲ್ಲಿಸಿದ ಮೇಲ್ಮನವಿಯನ್ನ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಆಲಿಸಿ ಆದೇಶವನ್ನ ಕಾಯ್ದಿರಿಸಿದ್ದಾರೆ ಎಂದು ಸಮಿತಿಯ ವಕೀಲ ಎಸ್ಎಫ್ಎ ನಖ್ವಿ ತಿಳಿಸಿದ್ದಾರೆ.
“ಈ ವಿಷಯದ ವಿಚಾರಣೆ ಪೂರ್ಣಗೊಂಡಿದೆ ಮತ್ತು ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದೆ” ಎಂದು ನಖ್ವಿ ಹೇಳಿದರು.
ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧ ಸಲ್ಲಿಸಿದ್ದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ಗಂಟೆಗಳಲ್ಲಿ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಯು ಫೆಬ್ರವರಿ 2 ರಂದು ಹೈಕೋರ್ಟ್ ಮೆಟ್ಟಿಲೇರಿತು.
“ನೀವು ನನ್ನ ಕುಟುಂಬದ ಜೊತೆ ಇರುತ್ತೀರಿ ಅನ್ನೋ ನಂಬಿಕೆಯಿದೆ” : ಮತದಾರರ ಬಳಿ ‘ಸೋನಿಯಾ ಗಾಂಧಿ’ ಮಾತು
ರಾಜ್ಯ ಸರ್ಕಾರದಿಂದ ‘ಸಮುದಾಯ ಭವನ’ ನಿರ್ಮಾಮಕ್ಕಾಗಿ ಅನುದಾನ ಮಂಜೂರು ಮಾಡಿ ಆದೇಶ