ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೂರು ಕೇಸ್ ಗಳ ಕುರಿತಾಗಿ ಇದೇ ಅಕ್ಟೋಬರ್ 21ರಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಲಿದೆ ಎಂದು ತಿಳಿದುಬಂದಿದೆ.
ಪ್ರಜ್ವಲ್ ರೇವಣ್ಣ ಅವರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ಸಂಬಂಧ ಅಕ್ಟೋಬರ್ 21ರಂದು ಹೈಕೋರ್ಟ್ ಆದೇಶ ಪ್ರಕಟಿಸಲಿದೆ. ಅಲ್ಲದೆ ಇದೆ ವೇಳೆ ಪ್ರಜ್ವಲ್ ರೇವಣ್ಣ ವಿರುದ್ಧದ ಮೂರು ಅತ್ಯಾಚಾರ ಕೇಸ್ ಸಂಬಂಧ ಆದೇಶ ಪ್ರಕಟಿಸಲಿದೆ.
ಹೈಕೋರ್ಟ್ ನ ನ್ಯಾಯಾಧೀಶರಾದ ಎಂ.ನಾಗ ಪ್ರಸನ್ನ ಅವರಿರುವ ಏಕ ಸದಸ್ಯ ಪೀಠ ಈ ಆದೇಶ ಪ್ರಕಟಿಸಲಿದೆ. ಕಳೆದ 120 ದಿನಗಳಿಂದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನದಲ್ಲಿ ಇದ್ದಾರೆ.