ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಜೆಡಿಎಸ್ ಪಕ್ಷವನ್ನು ಮುಗಿಸಲು ಆಪರೇಷನ್ ಹಸ್ತ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಪರೇಷನ್ ಹಸ್ತದ ಬಗ್ಗೆ ಜೆಡಿಎಸ್ ಶಾಸಕ ಜಿಟಿ ದೇವೆಗೌಡ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅಂತಹ ಯಾವುದೆ ವರ್ಕೌಟ್ ಆಗಲ್ಲ ಬಿಡಿ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ತಿಳಿಸಿದರು.
ಜೆಡಿಎಸ್ ಮುಗಿಸಬೇಕು ಅಂತ ಆಪರೇಷನ್ ಹಸ್ತ ಮಾಡುತ್ತಿದ್ದಾರೆ. 12 ರಿಂದ 13 ಶಾಸಕರನ್ನು ಕರೆತನ್ನಿ ಅಂತ ನಡೆಯುತ್ತಿರುವುದು ಗೊತ್ತಿದೆ.ಆದರೆ ಯಾವ ಶಾಸಕರು ಸಹ ಹೋಗುವ ಪರಿಸ್ಥಿತಿ ಇಲ್ಲ. ಕಾಂಗ್ರೆಸ್ನವರು ಏನೇನು ಮಾಡುತ್ತಿದ್ದಾರೆ ಎಲ್ಲವೂ ಗೊತ್ತಿದೆ.
ದೇವರೇ ಅವರಿಗೆ ಶಿಕ್ಷೆ ಕೊಡುತ್ತಾನೆ ಅಂತ ನನಗೆ ನಂಬಿಕೆ ಇದೆ ಎಂದರು.