ಬೆಂಗಳೂರು : ಮಹಿಳೆಯನ್ನು ಆಭರಣ ಮಾಡಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ನಿನ್ನೆ SIT ಅಧಿಕಾರಿಗಳು ಬಂಧಿಸಿದ್ದಾರೆ. ಎಸ್ ಐ ಟಿ ಅಧಿಕಾರಿಗಳು ಇಂದು ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.
ಬೆಂಗಳೂರಿನ ಕೋರಮಂಗಲದ ನ್ಯಾಯಾಧೀಶರ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ. ನ್ಯಾಯಾಧಿಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಧೀಶರು ರೇವಣ್ಣ ಅವರನ್ನು SIT ಕಸ್ಟಡಿಗೆ ನೀಡುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದ್ದು, ಹಾಗಾಗಿ HD ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರುವುದು ಫಿಕ್ಸ್ ಎಂದು ಹೇಳಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣ ಪರ ವಕೀಲರು ನಾಳೆ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇರಲಿದ್ದು, ಇತ್ತ SIT ಕೂಡ ಆಕ್ಷೇಪಣೆ ಸಲ್ಲಿಸಿ ರೇವಣ್ಣ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ಕೇಳಲಿದೆ ಎಂದು ತಿಳಿದುಬಂದಿದೆ. ಇಂದು ಬಹುತೇಕ ಶಾಸಕ ಎಚ್ ಡಿ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರುವುದು ಫಿಕ್ಸ್ ಆಗಿದೆ ಎಂದು ಹೇಳಲಾಗುತ್ತಿದೆ.
ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎಚ್ ಡಿ ರೇವಣ್ಣ ಅವರನ್ನ ಬಂಧಿಸಲಾಯಿತು.
ಅಲ್ಲದೆ ತಡರಾತ್ರಿವರೆಗೂ ಅವರನ್ನು ವಿಚಾರಣೆಗೆ ಒಳಪಡಿಸಿದ್ದು, ಇಂದು ಮ್ಯಾಜಿಸ್ಟ್ರೆಟ್ ಎದುರು ರೇವಣ್ಣ ಅವರನ್ನ ಹಾಜರುಪಡಿಸಲು SIT ಅಧಿಕಾರಿಗಳು ಎಲ್ಲಾ ದಾಖಲೆಗಳನ್ನು ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.