ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರ ಘಟನೆ ಒಂದು ನಡೆದಿದ್ದು, ಪೊಲೀಸ್ ಠಾಣೆಯಲ್ಲಿಯೇ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಸಂಚಾರಿ ಠಾಣೆಯಲ್ಲಿ ನಡೆದಿದೆ ಮೊಹಮ್ಮದ್ ಝಕ್ರಿಯ ಎನ್ನುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಕಳೆದ ಕೆಲವು ದಿನಗಳಿಂದ ಅವರು ರಜೆಯಲ್ಲಿ ಇದ್ದರು. ಮೂರು ದಿನದ ಹಿಂದೆ ಅಷ್ಟೇ ಮೊಹಮ್ಮದ್ ಡ್ಯೂಟಿಗೆ ಹಾಜರಾಗಿದ್ದರು. ಬಸ್ ನಿಲ್ದಾಣದ ಬಳಿ ಡ್ಯೂಟಿ ಮುಗಿಸಿ ಬಂದು ಪೊಲೀಸ್ ಠಾಣೆಯ ಹಿಂಬದಿಯ ಸೆಲ್ ಇರುವ ಜಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








