ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಹೆಡ್ ಕಾನ್ಸ್ ಟೇಬಲ್ ಒಬ್ಬರು ಮೃತಪಟ್ಟಿದ್ದಾರೆ.
ಬೇಗೂರು ಠಾಣೆಯ ಹೆಡ್ ಕಾನ್ಸ್ ಟೇಬಲ್ ನಿಜಾಮುದ್ದೀನ್ (44) ಹೃದಯಾಘಾತದಿಂದ ಮೃತಪಟ್ಟ ಕಾನ್ಸ್ ಟೇಬಲ್ ಆಗಿದ್ದಾರೆ. ಆಡುಗೋಡಿ ಪೊಲೀಸ್ ಕ್ವಾಟರ್ಸ್ ನಲ್ಲಿ ವಾಸವಿದ್ದ ನಿಜಾಮುದ್ದೀನ್ ಬೆಳಗ್ಗೆ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.