ದಾವಣಗೆರೆ: ದಾವಣಗೆರೆಯಲ್ಲಿ ಅನಧಿಕೃತ ಸ್ಕಿನ್ & ಹೇರ್ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ನಡೆದಿದೆ.
ಜಿಲ್ಲಾಧಿಕಾರಿ ಸೂಚನೆ ಮೇರೆಗೆ ದಾವಣಗೆರೆ ಜಿಲ್ಲೆಯ 15 ಅನಧಿಕೃತ ಸ್ಕಿನ್ & ಹೇರ್ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಕೆಪಿಎಂಎ ಆಕ್ಟ್ ಪ್ರಕಾರ ಸ್ಕಿನ್ & ಹೇರ್ ಕ್ಲಿನಿಕ್ ಗಳನ್ನು ನಡೆಸಲು ಅನುಮತಿ ಪಡೆದಿರಬೇಕು. ಆದರೆ ಕೇವಲ ಅರ್ಜಿ ಸಲ್ಲಿಸಿ ಕ್ಲಿನಿಕ್ ಗಳನ್ನು ನಡೆಸುತ್ತಿದ್ದ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.