ಉತ್ತರಪ್ರದೇಶ : ಇತ್ತೀಚಿಗೆ ಗುಜರಾತಿನ ವಾರಣಾಸಿಯಲ್ಲಿ 23 ಯುವಕರು ಯುವತಿಯ ಮೇಲೆ ಐದು ದಿನಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ನಡೆದಿದ್ದು ಕಿವಿ ಕೇಳದ ಹಾಗೂ ಮಾತು ಬಾರದ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ.
ಹೌದು ಉತ್ತರ ಪ್ರದೇಶದ ರಾಮಂಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಾಲಿಗೆ ಗುಂಡು ಹಾರಿಸುವ ಮೂಲಕ ಆರೋಪಿಯನ್ನು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ದೇಹದ ವಿವಿಧ ಭಾಗಗಳಲ್ಲಿ ಕಚ್ಚಿದ ಹಾಗೂ ಖಾಸಗಿ ಭಾಗಗಳಿಗೆ ಸಿಗರೇಟ್‌ನಿಂದ ಸುಟ್ಟ ಗುರತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವ ಶಂಕಿತನನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ನಾಪತ್ತೆಯಾಗಿದ್ದ ಬಾಲಕಿ ನಿನ್ನೆಯ ದಿನ ಮುಂಜಾನೆ ಆಕೆ ಬೆತ್ತಲೆಯಾಗಿ ಗಾಯಗೊಂಡ ಸ್ಥಿತಿಯಲ್ಲಿ ಹೊಲವೊಂದರಲ್ಲಿ ಪತ್ತೆಯಾಗಿದ್ದಳು. ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿಂದ ಮತ್ತೆ ಹೆಚ್ಚಿನ ಚಿಕಿತ್ಸೆಗಾಗಿ ಮೀರತ್‌ಗೆ ಕರೆದೊಯ್ಯಲಾಯಿತು. ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ಮೇಲಿನ ಬಲಾತ್ಕಾರ ಆರೋಪ ಮತ್ತು ಪೋಕ್ಸೊ ಕಾಯ್ದೆಯ ಕಠಿಣ ವಿಭಾಗಗಳ ಅಡಿಯಲ್ಲಿ ಪೊಲೀಸರು ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಘಟನೆಯ ಬಳಿಕ ಆರೋಪಿಯ ಸುಳಿವು ಪತ್ತೆ ಮಾಡಲು ಪೊಲೀಸರು ಆ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅದೇ ಗ್ರಾಮದ ನಿವಾಸಿ ಡಾನ್ ಸಿಂಗ್ (24) ಎಂಬಾತನ ಮೇಲೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ಆತನನ್ನು ಬಂಧಿಸಲು ಹೋಗಿದ್ದಾರೆ. ಆದರೆ ಈ ವೇಳೆ ಆತ ಪೊಲೀಸರ ಮೇಲೆಯೇ ಗುಂಡು ಹಾರಿಸಿದ್ದಾನೆ. ಈ ವೇಳೆ ಪೊಲೀಸರು ಪ್ರತಿದಾಳಿ ನಡೆಸಿದ್ದು, ಆತನ ಕಾಲಿಗೆ ಗಾಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.