ಬೆಂಗಳೂರು : ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ಅಂತಿಮ ಹಂತದ ವಿಚಾರಣೆ ಇಂದು ನಡೆಯಲಿದ್ದು, ರಾಜ್ಯದ ಜನರ ಚಿತ್ತ ಹೈಕೋರ್ಟ್ ನತ್ತ ನೆಟ್ಟಿದೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದ್ದು, ಇಂದೇ ವಾದ ಮಂಡನೆ ಮುಗಿಸುವಂತೆ ನ್ಯಾ. ಎಂ.ನಾಗಪ್ರಸನ್ನ ಸೂಚನೆ ನೀಡಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸುತ್ತಿದೆ.