ತುಮಕೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಹಾಸನ ಜಿಲ್ಲೆ ಒಂದರಲ್ಲಿ ಕಳೆದ 40 ದಿನಗಳಲ್ಲಿ ಇವತ್ತಿನವರೆಗೂ ಒಟ್ಟು 25 ಜನ ಸಾವನಪ್ಪಿದ್ದಾರೆ. ಇದೀಗ ತುಮಕೂರಿನಲ್ಲಿ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ಹೃದಯಘಾತದಿಂದ ಸಾವನಪ್ಪಿದ್ದಾರೆ.
ಹೌದು ತುಮಕೂರಿನಲ್ಲಿ ಬಿಜೆಪಿಯ ಯುವ ಮುಖಂಡ ನೀಲಕಂಠ ಸ್ವಾಮಿ, (36) ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.ತುಮಕೂರು ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷರಾಗಿದ್ದ ನೀಲಕಂಠ ಸ್ವಾಮಿ ಇದು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ರಾಜ್ಯ ಸರ್ಕಾರ ಕೂಡ ಹೃದಯಾಘಾತಕ್ಕೆ ಏನು ಕಾರಣ ಎಂದು ಈಗಾಗಲೇ ಆರೋಗ್ಯ ಇಲಾಖೆ ಒಂದು ಕಮಿಟಿ ಸಹ ರಚನೆ ಮಾಡಿದೆ. ಇಂದು ಬೆಳಿಗ್ಗೆಯಿಂದ ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.