Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

BREAKING : ಶಿವಮೊಗ್ಗದಲ್ಲಿ ಶಾಸಕ ಬಿಕೆ ಸಂಗಮೇಶ ಪುತ್ರನ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಬೆಚ್ಚಿ ಬಿದ್ದ ಜನತೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ `ಹೃದಯಾಘಾತ’ ಮರಣ ಮೃದಂಗ : ಇಂದು ಒಂದೇ ದಿನ ಐವರು ಬಲಿ.!
KARNATAKA

BREAKING : ರಾಜ್ಯದಲ್ಲಿ `ಹೃದಯಾಘಾತ’ ಮರಣ ಮೃದಂಗ : ಇಂದು ಒಂದೇ ದಿನ ಐವರು ಬಲಿ.!

By kannadanewsnow57

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು,ಇಂದು ಒಂದೇ ದಿನ ಐವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಹೃದಯಾಘಾತದಿಂದ ಗೂಡ್ಸ್ ವಾಹನ ಚಾಲಕ ಸಾವು

ಬೆಳಗಾವಿ ಜಿಲ್ಲೆಯ ಸೌದತ್ತಿ ಪಟ್ಟಣದ ಎಪಿಎಂಸಿಯಲ್ಲಿ ಆವರಣದಲ್ಲಿ ಈ ಒಂದು ಘಟನೆ ನಡೆದಿದ್ದು, ಹೃದಯಾಘಾತದಿಂದ ಅಶೋಕ್ ಜೀರಿಗವಾಡ (40) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಮೃತ ಅಶೋಕ್ ಸೌದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಸೌದತಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಗೆ ಅಶೋಕ್ ಹೆಸರು ಕಾಳು ತಂದಿದ್ದರು. ಈ ವೇಳೆ ಎದೆನೋವಿನಿಂದ ಕುಸಿದು ಬಿದ್ದು ಚಾಲಕ ಅಶೋಕ್ ಸಾವನಪ್ಪಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆಯಲ್ಲಿ 22 ವರ್ಷದ ಯುವಕ ಸಾವು

ದಾವಣಗೆರೆಯಲ್ಲಿ ಹೃದಯಾಘಾತದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರ ಅಕ್ಷಯ್ ಮೃತಪಟ್ಟವರು.ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅಕ್ಷಯ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಕನಕಪುರದಲ್ಲಿ 38 ವರ್ಷದ ವ್ಯಕ್ತಿ ಸಾವು

ಕನಕಪುರ ತಾಲೂಕಿನ ಕೊಗ್ಗೆ ದೊಡ್ಡಿ ಗ್ರಾಮದ 38 ವರ್ಷದ ಮಾದೇಶ್ ನಾಯ್ಕ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಾದೇಶ್ ನಾಯ್ಕ್ ಫಾರೆಸ್ಟ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.

ಧಾರವಾಡದಲ್ಲಿ ಯುವತಿ ಸಾವು

ಧಾರವಾಡದಲ್ಲಿ 25 ವರ್ಷದ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪುರೋಹಿತ ನಗರದ ಜೀವಿತಾ ಕುಸಗೂರು ಸಾವನ್ನಪ್ಪಿದ್ದಾರೆ.

ಕಲಬುರಗಿಯಲ್ಲಿ 22 ವರ್ಷದ ನವವಿವಾಹಿತ ಯುವಕ ಬಲಿ

ಕಲಬುರಗಿಯಲ್ಲಿ ಹೃದಯಾಘಾತದಕ್ಕೆ ಯುವಕ 22 ವರ್ಷದ ಮೊಹಸೀನ್ ಪಟೇಲ್ ಬಲಿಯಾಗಿದ್ದಾರೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ ಮನೆಯಲ್ಲಿ ಕುಸಿದು ಬಿದ್ದ ಮೊಹಸೀನ್ ಪಟೇಲ್ ಮೃತಪಟ್ಟಿದ್ದಾರೆ.

BREAKING : `Heart attack' deaths in the state Mridangam: Fifty victims in one day today.!
Share. Facebook Twitter LinkedIn WhatsApp Email

Related Posts

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

2 Mins Read

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

1 Min Read

BREAKING : ಶಿವಮೊಗ್ಗದಲ್ಲಿ ಶಾಸಕ ಬಿಕೆ ಸಂಗಮೇಶ ಪುತ್ರನ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಬೆಚ್ಚಿ ಬಿದ್ದ ಜನತೆ!

2 Mins Read
Recent News

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

BREAKING : ಶಿವಮೊಗ್ಗದಲ್ಲಿ ಶಾಸಕ ಬಿಕೆ ಸಂಗಮೇಶ ಪುತ್ರನ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಬೆಚ್ಚಿ ಬಿದ್ದ ಜನತೆ!

ನಮ್ಮ ಅದೃಷ್ಟನೋ, ಹಣೆಬರಹವೋ, ಗೊತ್ತಿಲ್ಲ ನಾನು ಸೋತ ಕಾರಣಕ್ಕೆ ಸಿದ್ದರಾಮಯ್ಯ ಸಿಎಂ ಆದ್ರೂ : ಜಿ.ಪರಮೇಶ್ವರ್

State News
KARNATAKA

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

By ಸುರೇಶ್‌ KARNATAKA 2 Mins Read

ಮಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಎಪಿಎಲ್ ಕುಟುಂಬಗಳಿಗೂ ಹೆಚ್ಚಿನ ಸರ್ಕಾರಿ ನೆರವು ನೀಡಲು ಚಿಂತನೆ ನಡೆಸಲಾಗುತ್ತದೆ ಎಂದು…

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

BREAKING : ಶಿವಮೊಗ್ಗದಲ್ಲಿ ಶಾಸಕ ಬಿಕೆ ಸಂಗಮೇಶ ಪುತ್ರನ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಬೆಚ್ಚಿ ಬಿದ್ದ ಜನತೆ!

ನಮ್ಮ ಅದೃಷ್ಟನೋ, ಹಣೆಬರಹವೋ, ಗೊತ್ತಿಲ್ಲ ನಾನು ಸೋತ ಕಾರಣಕ್ಕೆ ಸಿದ್ದರಾಮಯ್ಯ ಸಿಎಂ ಆದ್ರೂ : ಜಿ.ಪರಮೇಶ್ವರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.