ಶಿವಮೊಗ್ಗ : ಖಾಸಗಿ ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಗಾತವಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮುಡುಬಾ ಗ್ರಾಮದ ಬಳಿ ಘಟನೆ ನಡೆದಿದೆ. ಹೃದಯಾಘಾತವಾದರೂ ಚಾಲಕ ರಮೇಶ್ ಸಮಯ ಪ್ರಜ್ಞೆ ಮೆರೆದಿದ್ದಾರೆ.ಹೃದಯಾಘಾತವಾದರೂ ಚಾಲಕ ರಮೇಶ್ ರಸ್ತೆ ಬದಿ ಬಸ್ ನಿಲ್ಲಿಸಿದ್ದಾರೆ.
ಬಸ್ ಚಾಲನೆ ವೇಳೆಯೇ ರಮೇಶ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಪ್ರಯಾಣಿಕರು ಅಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ಕರೆದೊಯ್ಯದಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








