ಹುಬ್ಬಳ್ಳಿ : ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು, ಬೆಂಗಳೂರು ಮಹಾನಗರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇದೀಗ ಹುಬ್ಬಳ್ಳಿಯಲ್ಲಿ ಹೊಲದಿಂದ ಮನೆಗೆ ತೆರಳುವಾಗ ಭಾರಿ ಮಳೆಯಿಂದ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಹುಬ್ಬಳ್ಳಿಯ ಬೆಳಗಲಿ ಕ್ರಾಸ್ ಬಳಿ ಈ ಒಂದು ಘಟನೆ ನಡೆದಿದೆ.
ಹೌದು ಹುಬ್ಬಳ್ಳಿಯಲ್ಲಿ ಮಳೆಯಲ್ಲಿ ವ್ಯಕ್ತಿ ಒಬ್ಬ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಬೆಳಗಲಿ ಕ್ರಾಸ್ ರಸ್ತೆ ಪಕ್ಕದಲ್ಲಿರುವ ಚರಂಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಹುಸೇನ್ ಎನ್ನುವ ವ್ಯಕ್ತಿ ಕೊಚ್ಚಿ ಹೋಗಿದ್ದಾನೆ. ಹೊಲದಿಂದ ಮನೆಗೆ ತೆರಳುವಾಗ ಹುಸೇನ್ ಕೊಚ್ಚಿ ಹೋಗಿದ್ದಾನೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ನೀರಿನಲ್ಲಿ ಕಾಲು ಜಾರಿ ಬಿದ್ದು ಹುಸೇನ್ ಕೊಚ್ಚಿ ಹೋಗಿದ್ದಾನೆ. ಸದ್ಯ ಹುಸೇನ್ ಗಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಹುಡುಕಾಟ ನಡೆಸುತ್ತಿದ್ದಾರೆ.