ಕಲಬುರ್ಗಿ : ಕಳೆದ 48 ಗಂಟೆಗಳಿಂದ ಕಲ್ಬುರ್ಗಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇದೀಗ ಪ್ರವಾಹದ ನೀರಿನಲ್ಲಿ ಜಾನುವಾರುಗಳು ಕೊಚ್ಚಿ ಹೋಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲ್ಬುರ್ಗಿಯಲ್ಲಿ ವರುಣನ ಅಬ್ಬರಕ್ಕೆ ಜನ ಜೀವನ ಸಂಪೂರ್ಣ ತತ್ತರಿಸಿ ಹೋಗಿದೆ.
ಇದೀಗ ಪ್ರವಾಹದ ನೀರಿನಲ್ಲಿ ಮೂರು ಜಾನುವಾರುಗಳು ಕೊಚ್ಚಿ ಹೋಗಿವೆ. ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಡ್ಯಾಮ್ ಸಂಪೂರ್ಣವಾಗಿ ನೀರಿನಿಂದ ಬೋರ್ಗರೆಯುತ್ತಿದ್ದು ಚಂದ್ರಪ್ಪಳ್ಳಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ ಈ ವೇಳೆ 3 ಜಾನುವಾರುಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿವೆ. ಈ ಒಂದು ದೃಶ್ಯ ವೈರಲಾಗಿದೆ.