ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ಇತರೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಇಂದು ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ಸಂಬಂಧ ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ರಾಜ್ಯದ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಜುಲೈ 24ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುವ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಕಾಲೇಜು ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರದಲ್ಲಿ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪರೀಕ್ಷೆ ನಡೆಯುವ ಶಾಲೆಗಳಿಗೆ ರಜೆ ಘೋಷಿಸಿಲ್ಲ.
ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ .
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. ಮೂಲ: ಐಎಂಡಿ ಬೆಂಗಳೂರು. #KSNDMC #ಮುಂಗಾರುಮಳೆ #ಸುರಕ್ಷಿತವಾಗಿರಿ #ಎಚ್ಚರಿಕೆವಹಿಸಿ pic.twitter.com/7oSpNcVk4W
— Karnataka State Natural Disaster Monitoring Centre (@KarnatakaSNDMC) July 24, 2025
ಜುಲೈ 25ರಂದು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಿದ್ದರೇ, ಬೀದರ್, ಕಲಬುರ್ಗಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ಚಿತ್ರದುರ್ಗ, ತುಮಕೂರು, ಮೈಸೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಆರೆಂಟ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜುಲೈ 26 ಮತ್ತು ಜುಲೈ 27ರಂದು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ನೀಡಿದ್ದರೇ, ಮೈಸೂರು, ಮಂಡ್ಯ, ಹಾಸನ, ಕೊಡಗು ಸೇರಿದಂತೆ ಇತರೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಿನಾಂಕ 28-07-2025ರಂದು ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಆರೇಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.