ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು, ಮುನ್ನೆಚ್ಚರಿಕ ಕ್ರಮವಾಗಿ ನಾಳೆ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ರಜೆ ಘೋಷಿಸಲಾಗಿದೆ.
ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಮತ್ತು ಪಿಯುಸಿ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಆದೇಶಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಕುರಿತು ಆದೇಶ ಹೊರಡಿಸಿದ್ದಾರೆ.