ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದಾಗಿ ಕೆಮ್ಮಣ್ಣುಗುಂಡಿಯಲ್ಲಿ ಗುಡ್ಡ ಕುಸಿತವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿಯಲ್ಲಿ ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ. ರಸ್ತೆಗೆ ಅಡ್ಡಲಾಗಿ ಗುಡ್ಡದ ಮಣ್ಣು, ಮರ, ಗಿಡಗಳು ಬಿದ್ದಿವೆ.
ಕೆಮ್ಮಣ್ಣುಗುಂಡಿಯ ರಾಜಭವನದ ರಸ್ತೆಯಲ್ಲಿ ಭೂಕುಸಿತವಾಗಿದೆ. ಕೆಮ್ಮಣ್ಣುಗುಂಡಿಯಿಂದ Z ಪಾಯಿಂಟ್ ರಸ್ತೆ ಸಂಪರ್ಕ ಕಡಿತವಾಗಿದೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.