ಚಿಕ್ಕಮಗಳೂರು : ಈಗಾಗಲೇ ರಾಜ್ಯದಲ್ಲಿ ಬೆಂಗಳೂರು ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಅದರಲ್ಲೂ ಬೆಂಗಳೂರಿನ ಹಲವು ರಸ್ತೆಗಳಂತೂ ನದಿಯಂತೆ ಆಗಿವೆ. ಅದರಂತೆ ಇದೀಗ ಚಿಕ್ಕಮಂಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಚಿಕ್ಕಮಂಗಳೂರು ಜಿಲ್ಲೆಗೆ ನಾಳೆ ಮತ್ತು ನಾಡಿದ್ದು ರೆಡ್ ಅಲರ್ಟ್ ಘೋಷಿಸಿದೆ.
ಹೌದು ಇಂದು ಚಿಕ್ಕಮಂಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆ ಆಗುತ್ತಿದೆ. ವರ್ಣನ ಅಬ್ಬರದಿಂದ ಚಿಕ್ಕಮಂಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಹಲವಾರು ಅವಾಂತರಗಳು ಸೃಷ್ಟಿಯಾಗಿವೆ. ಚಿಕ್ಕಮಂಗಳೂರು ನಗರ, ಕೊಪ್ಪ, ಕಳಸ, ಮೂಡಿಗೆರೆ ಹಾಗೂ ಶೃಂಗೇರಿ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಹಾಗಾಗಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಾಳೆ ಮತ್ತು ನಾಡಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯಿಂದ 2 ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.