Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ವಿದ್ಯಾರ್ಥಿಗಳ ಆತ್ಮಹತ್ಯೆಗಳು ಸಾಂಸ್ಥಿಕ ವೈಫಲ್ಯದ ಸಂಕೇತ: ಸುಪ್ರೀಂ ಕೋರ್ಟ್ ಸಮಿತಿಯ ಗಂಭೀರ ಅಭಿಪ್ರಾಯ!

SHOCKING : ಮನೆಯ ಮೇಲಿನ ನೀರಿನ ಟ್ಯಾಂಕ್‌ ನಲ್ಲಿ 27 ಹಾವಿನ ಮರಿಗಳು ಪತ್ತೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ!
KARNATAKA

BREAKING : ಬೆಂಗಳೂರಲ್ಲಿ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ!

By ಸುರೇಶ್‌

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದ್ದು, ನಗರದ ಪ್ರಮುಖ ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಬೆನ್ನಲ್ಲೇ, ಸಿಲಿಕಾನ್ ಸಿಟಿಯಲ್ಲಿ ಮಳೆರಾಯ ಅಬ್ಬರಿಸತೊಡಗಿದ್ದಾನೆ. ದಿಢೀರ್‌ ಎಂದು ಸುರಿದ ಈ ಭಾರಿ ಮಳೆಯಿಂದಾಗಿ ವಾಹನ ಸವಾರರು ಮತ್ತು ಸಾರ್ವಜನಿಕರು ಪರದಾಡುವಂತಾಗಿದೆ.

ನಗರದ ಹೃದಯಭಾಗವಾದ ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ಟೌನ್ ಹಾಲ್, ಕಾರ್ಪೋರೇಶನ್, ಶಾಂತಿನಗರ, ವಸಂತನಗರ ಮತ್ತು ಸದಾಶಿವನಗರ ಸೇರಿದಂತೆ ಮಧ್ಯ ಬೆಂಗಳೂರಿನ ಬಹುತೇಕ ಪ್ರದೇಶಗಳು ಮಳೆಯಿಂದ ಸಂಪೂರ್ಣವಾಗಿ ತೊಯ್ದು ತೊಪ್ಪೆಯಾಗಿವೆ. ಮಳೆಯ ತೀವ್ರತೆಗೆ ರಸ್ತೆಗಳಲ್ಲಿ ನೀರು ನಿಂತು ಸಂಚಾರ ದಟ್ಟಣೆ ಉಂಟಾಗಿದ್ದು, ಕಚೇರಿಗಳಿಂದ ಮನೆಗೆ ಮರಳುತ್ತಿದ್ದ ಸಾರ್ವಜನಿಕರು ಹೈರಾಣಾಗಿದ್ದಾರೆ.

ಮತ್ತೊಂದೆಡೆ ಮಲ್ಲೇಶ್ವರಂ, ಶೇಷಾದ್ರಿಪುರಂ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್, ವಿಜಯನಗರ, ಸುಬ್ರಮಣ್ಯನಗರ, ನಾಗರಬಾವಿ, ಮೂಡಲಪಾಳ್ಯ ಹಾಗೂ ಲಗ್ಗೆರೆ ಸೇರಿದಂತೆ ಪಶ್ಚಿಮ ಮತ್ತು ಉತ್ತರ ಬೆಂಗಳೂರಿನ ವಸತಿ ಪ್ರದೇಶಗಳಲ್ಲೂ ಬಿಡದೇ ಮಳೆ ಸುರಿದಿದೆ. ಹಲವು ಕಡೆಗಳಲ್ಲಿ ರಸ್ತೆಗಳ ಮೇಲೆ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.

ಇದೇ ವೇಳೆ ದಕ್ಷಿಣ ಮತ್ತು ಈಶಾನ್ಯ ಬೆಂಗಳೂರಿನ ಭಾಗಗಳಾದ ಹೆಬ್ಬಾಳ, ಯಲಹಂಕ, ಗಿರಿನಗರ, ಬಸವನಗುಡಿ, ಜಯನಗರ, ಜೆ.ಪಿ ನಗರ, ಬನಶಂಕರಿ ಹಾಗೂ ಕೋಣನಕುಂಟೆ ವ್ಯಾಪ್ತಿಯಲ್ಲೂ ವರುಣನ ಅಬ್ಬರ ಮುಂದುವರಿದಿದೆ. ಬಿರುಗಾಳಿಯ ತೀವ್ರತೆಗೆ ಕೆಲವು ಕಡೆ ಮರಗಳ ಕೊಂಬೆಗಳು ಮುರಿದು ಬಿದ್ದಿರುವ ವರದಿಯಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.

ಇನ್ನು ಭಾರಿ ಮಳೆಯ ಹಿನ್ನೆಲೆಯಲ್ಲಿ ಅನಾಹುತಗಳನ್ನು ತಪ್ಪಿಸಲು ಬಿಬಿಎಂಪಿ ಮತ್ತು ಸಂಚಾರಿ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕಳೆದ ಬಾರಿ ಭಾರಿ ಮಳೆಗೆ ತುತ್ತಾಗಿದ್ದ ಪ್ರಮುಖ ಜಂಕ್ಷನ್ ಆದ ಕೆ.ಆರ್. ಸರ್ಕಲ್ ಅಂಡರ್ ಪಾಸ್ ಅನ್ನು ಮುನ್ನೆಚ್ಚರಿಕೆಯಾಗಿ ಸಾರ್ವಜನಿಕ ಹಾಗೂ ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ಕ್ಲೋಸ್ ಮಾಡಲಾಗಿದೆ. ಬ್ಯಾರಿಕೇಡ್‌ಗಳನ್ನು ಹಾಕಿ ವಾಹನಗಳನ್ನು ಪರ್ಯಾಯ ಮಾರ್ಗಗಳತ್ತ ತಿರುಗಿಸಲಾಗುತ್ತಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

2 Mins Read

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

2 Mins Read

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

2 Mins Read
Recent News

​ವಿದ್ಯಾರ್ಥಿಗಳ ಆತ್ಮಹತ್ಯೆಗಳು ಸಾಂಸ್ಥಿಕ ವೈಫಲ್ಯದ ಸಂಕೇತ: ಸುಪ್ರೀಂ ಕೋರ್ಟ್ ಸಮಿತಿಯ ಗಂಭೀರ ಅಭಿಪ್ರಾಯ!

SHOCKING : ಮನೆಯ ಮೇಲಿನ ನೀರಿನ ಟ್ಯಾಂಕ್‌ ನಲ್ಲಿ 27 ಹಾವಿನ ಮರಿಗಳು ಪತ್ತೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

State News
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ನೂತನ ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅವರು ಸೋಮವಾರ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.…

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.