ದಕ್ಷಿಣ ಕನ್ನಡ ಜಿಲ್ಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತವಾಗಿದ್ದು, ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರ ಬಂದ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಗುಡ್ಡ ಕುಸಿತವಾಗಿದ್ದು, ಬೆಂಗಳೂರು-ಮಂಗಳೂರು ಸಂಪರ್ಕಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ.
ಇನ್ನೂ ಕೊಪ್ಪಳ ಜಿಲ್ಲೆಯಲ್ಲಿ ಸತತ ಮಳೆಗೆ ಮನೆ ಕುಸಿದು ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಒಂದೂವರೆ ವರ್ಷದ ಪ್ರಶಾಂತಿ ಸಾವನ್ನಪ್ಪಿದ್ದು, 6 ಜನರು ಗಾಯಗೊಂಡಿದ್ದಾರೆ.