ಬೆಂಗಳೂರು : ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇದೀಗ ಬೆಂಗಳೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ನಗರದ ಹಲವೆಡೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಇಂದಿನ ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಐಪಿಎಲ್ ಪಂದ್ಯ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬೆಂಗಳೂರು ನಗರದ ಶಾಂತಿನಗರ, ರಿಚ್ಮಡ್ ಸರ್ಕಲ್, ಕಾರ್ಪೊರೇಷನ್, ಕಬ್ಬನ್ ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ರಾಜಾಜಿನಗರ, ಲಾಲ್ ಬಾಗ್, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.
ಒಂದು ಕಡೆ ವರುಣ ಅಬ್ಬರಿಸುತ್ತಿದ್ದರೆ, ಇನ್ನೊಂದು ಕಡೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಕೆಕೆಆರ್ ಪಂದ್ಯ ನಡೆಯಲಿದ್ದು ಇದೀಗ ಭಾರಿ ಮಳೆ ಆಗುತ್ತಿರುವುದರಿಂದ ಟಾಸ್ ವಿಳಂಬವಾಗಿದೆ. ಇದೇ ರೀತಿ ಮಳೆ ಮುಂದುವರೆದರೆ ಪಂದ್ಯ ಬಹುತೇಕ ರದ್ದಾಗುವ ಸಾಧ್ಯತೆ ಇದೆ. ಈ ಬಾರಿ ಆರ್ಸಿಬಿ ಉತ್ತಮ ಫಾರ್ಮ್ ನಲ್ಲಿದ್ದು ಫೈನಲ್ ಗೇರಿ ಕಪ್ಪು ಹಿಡಿಯುವ ತವಕದದೆ. ಆದರೆ ಇಂದು ಪಂದ್ಯ ರದ್ದಾದರೆ ಆರ್ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗುವುದು ಗ್ಯಾರಂಟಿ.