ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆಯ ಆರ್ಭಟ ಮುಂದುವರೆದಿದ್ದು, ಶಾಂತಿನಗರದ ಬಿಎಂಟಿಸಿ ಬಸ್ ಡಿಪೋ-ಜಲಾವೃತಗೊಂಡಿದೆ.
ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಶಾಂತಿನಗರದ ಬಿಎಂಟಿಸಿ ಬಸ್ ಡಿಪೋ-ಜಲಾವೃತಗೊಂಡಿದೆ, 100 ಕ್ಕೂ ಹೆಚ್ಚು ಬಸ್ ಗಳು ಡಿಪೋದಲ್ಲಿ ನಿಂತಿವೆ.
ಬೆಂಗಳೂರಿನ ಭಾರೀ ಮಳೆಯಿಂದಾಗಿ ಹಲವಡೆ ಅವಾಂತರ ಸೃಷ್ಟಿಯಾಗಿದ್ದು, ಆಡುಗೋಡಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಜನರಿಗೆ ಸಂಕಷ್ಟ ಎದುರಾಗಿದೆ. ಮನೆಯಿಂದ ನೀರು ಹೊರಹಾಕಲು ಜನರು ಪರದಾಡಿದ್ದಾರೆ. ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಮನೆಗಳಲ್ಲಿ ಇದ್ದ ವಸ್ತುಗಳು, ಆಹಾರ ಪದಾರ್ಥಗಳು ಚೆಲ್ಲಾಪಿಲ್ಲಿಯಾಗಿವೆ. ಶಾಂತಿನಗರ, ರಿಚ್ ಮಂಡ್ ಸರ್ಕಲ್ ಬಳಿ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಇನ್ನೂ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಲಕ್ಕಸಂದ್ರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಪುಕ್ ರಾಜ್ ಬಡಾವಣೆಯ 2ನೇ ಮುಖ್ಯ ರಸ್ತೆ ಜಲಾವೃತೊಂಡಿದೆ. ಮನೆಗಳಿಗೆ ನೀರು ನುಗ್ಗಿ ಸ್ಥಳಿಯ ನಿವಾಸಿಗಳು ಪರದಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಮೋಟಾರ್ ಹಾಕಿ ನೀರು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಚಾಮರಾಜಪೇಟೆಯ ಶಿರಸಿ ರಸ್ತೆಯಲ್ಲಿ ಮಳೆ ಅಬ್ಬರಕ್ಕೆ ರಸ್ತೆ ಬದಿಯ ಬೃಹತ್ ಮರ ಉರುಳಿ ಬಿದ್ದಿದ್ದು, ವಾಹನ ಸವಾರರು ಪರದಾಡಿದ್ದಾರೆ.