ಮಂಗಳೂರು : ಮಂಗಳೂರು ಸಮೀಪದ ಉಳ್ಳಾಲದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, ಮೂವರು ಮಣ್ಣಿನಡಿ ಸಿಲುಕಿದ್ದು, ರಕ್ಷಣೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಮೋಂಟೆಪದವು ಬಳಿ ಗುಡ್ಡ ಕುಸಿದು ಸಿಲುಕಿದ್ದವರಲ್ಲಿ ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ. ಮಂಗಳೂರು ಸುತ್ತಾಮುತ್ತಾ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನೆಲೆ ಗುಡ್ಡ ಕುಸಿದಿದ್ದು, ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಣ್ಣಿನಡಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದೆ.
ಮೊಂಟೆಪದವು ಬಳಿ ಗುಡ್ಡ ಕುಸಿದು ಐವರು ಸಿಲುಕಿದವರಲ್ಲಿ ಪ್ರೇಮಾ ಪೂಜಾರಿ ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂವರು ಗುಡ್ಡದಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.