ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಅವಾಂತರಕ್ಕೆ ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ. ನಿರಂತರ ಮಳೆಯಿಂದ ಉಂಟಾದ ಭೂಕುಸಿತದ ಪರಿಣಾಮವಾಗಿ ಮನೆ ಕುಸಿದಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿವೆ.
ಮಂಗಳೂರಿನಲ್ಲಿ ಭಾರಿ ಮಳೆಗೆ ಗುಡ್ಡ ಕುಸಿತ : ಮನೆಯಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು
ಮಂಗಳೂರು ಸಮೀಪದ ಮೋಂಟೆಪದವು ಬಳಿ ಗುಡ್ಡ ಕುಸಿದು ಸಿಲುಕಿದ್ದವರಲ್ಲಿ ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ. ಮಂಗಳೂರು ಸುತ್ತಾಮುತ್ತಾ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನೆಲೆ ಗುಡ್ಡ ಕುಸಿದಿದ್ದು, ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಣ್ಣಿನಡಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದೆ.
ಮೊಂಟೆಪದವು ಬಳಿ ಗುಡ್ಡ ಕುಸಿದು ಐವರು ಸಿಲುಕಿದವರಲ್ಲಿ ಪ್ರೇಮಾ ಪೂಜಾರಿ ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂವರು ಗುಡ್ಡದಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಮಂಗಳೂರಿನಲ್ಲಿ ಕಾಂಪೌಂಡ್ ಕುಸಿದು ಬಿದ್ದು 10 ವರ್ಷದ ಬಾಲಕಿ ಸಾವು.!
ಭಾರಿ ಮಳೆಗೆ ಕಾಂಪೌಂಡ್ ಕುಸಿದು ಬಾಲಕಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕೆರೆ ಎಂಬಲ್ಲಿ ನಡೆದಿದೆ.
ಮನೆಗೆ ಹಿಂಬದಿಯ ತಡೆಗೋಡೆ ಕುಸಿದು ಬಿದ್ದಿದ್ದು, ಬಾಲಕಿ ನಯಿಮ (10) ಮೃತಪಟ್ಟಿದ್ದಾರೆ. ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡು ನಯಿಮ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
#WATCH | Mangaluru, Karnataka | Search and rescue operations underway as a house collapsed following a landslide triggered by incessant rainfall. NDRF and SDRF teams are at the spot. pic.twitter.com/AjHqML28qG
— ANI (@ANI) May 30, 2025