ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಬೆಳಗಾವಿ, ಖಾನಾಪುರ ತಾಲ್ಲೂಕಿನ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ
ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ತಾಲ್ಲೂಕಿನಲ್ಲಿ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.22 ಮತ್ತು ಜು.23 ರಂದು ರಜೆ ಘೋಷಿಸಲಾಗಿದೆ. ಅದೇ ರೀತಿ ಖಾನಾಪುರ ತಾಲ್ಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೂ ಜುಲೈ 22 ಮತ್ತು 23 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ರಜೆ ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಎಲ್ಲಾ ಶಾಲೆ,ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ.