ಬೆಂಗಳೂರು : ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಬೆಂಗಳೂರಲ್ಲಿ ಇಂದು ಏಕಾಏಕಿ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಂಗಳೂರಿನ ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಇದೀಗ ಭಾರಿ ಮಳೆ ಆಗುತ್ತಿದೆ
ಬೆಂಗಳೂರಿನ ಹಲವೆಡೆ ಇಂದು ಧಾರಾಕಾರ ಮಳೆ ಸುರಿಯುತ್ತಿದ್ದು, ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ರೇಸ್ ಕೋರ್ಸ್ ರಸ್ತೆ, ಟೌನ್ ಹಾಲ್, ಕಾರ್ಪೊರೇಷನ್ ಸರ್ಕಲ್, ಎಂ ಜಿ ರಸ್ತೆ, ಶಾಂತಿನಗರ, ಕೆಆರ್ ಮಾರ್ಕೆಟ್ ಹಾಗು ಜಯನಗರ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇದೀಗ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯಿಂದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.