ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ. ಮುಂದಿನ 24 ಗಂಟೆಗಳಲ್ಲಿ ನಗರದಾದ್ಯಂತ ಬಿರುಗಾಳಿ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುಚ್ಚರಿಕೆ ನೀಡಿದೆ.
ಹವಾಮಾನ ಇಲಾಖೆಯ ವರದಿಯ ಪ್ರಕಾರ, ನಗರದಲ್ಲಿ ಸಂಜೆ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ತದನಂತರ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಮಳೆಯ ಜೊತೆಗೆ ಬಲವಾದ ಬಿರುಗಾಳಿ ಬೀಸುವ ಹಾಗೂ ಗುಡುಗು ಸಿಡಿಲಿನ ಅಬ್ಬರವೂ ಇರಲಿದೆ ಎಂದು ತಿಳಿಸಲಾಗಿದೆ.
ಹಠಾತ್ ಹವಾಮಾನ ಬದಲಾವಣೆ ಮತ್ತು ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಅನಗತ್ಯ ಪ್ರಯಾಣವನ್ನು ತಪ್ಪಿಸಬೇಕು ಎಂದು ಹವಾಮಾನ ಇಲಾಖೆ ವಿನಂತಿಸಿದೆ.








