ನವದೆಹಲಿ : ಪಕ್ಷದ ಹಿರಿಯ ನಾಯಕ ಚಂಪೈ ಸೊರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಜಾರ್ಖಂಡ್ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಗುರುವಾರ ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರನ್ನ ರಾಜ್ಯದಲ್ಲಿ ಸರ್ಕಾರ ರಚಿಸಲು ಆಹ್ವಾನಿಸಿದ್ದಾರೆ.
ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಅಧ್ಯಕ್ಷ ರಾಜೇಶ್ ಠಾಕೂರ್ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Hemant Soren will take oath as Jharkhand CM at 5 pm today
(File photo) pic.twitter.com/cVKgvNgn67
— ANI (@ANI) July 4, 2024
ಜುಲೈ 7 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ ಸುಪ್ರಿಯೋ ಭಟ್ಟಾಚಾರ್ಯ ಹೇಳಿದ್ದಾರೆ.
‘ಮುಡಾ’ ಅಕ್ರಮ ಆರೋಪ : ಬಿಜೆಪಿಗರು ‘RSS’ ಹೇಳಿದಂತೆ ಕೇಳುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಉದ್ಯೋಗಿಗಳಿಗೆ ಮಹತ್ವದ ಮಾಹಿತಿ ; ಕೇಂದ್ರ ಸರ್ಕಾರದಿಂದ ‘GPF, PF ಬಡ್ಡಿದರ’ ಘೋಷಣೆ
BREAKING : ಜಾರ್ಖಂಡ್ ನೂತನ ಸಿಎಂ ಆಗಿ ‘ಹೇಮಂತ್ ಸೊರೆನ್’ ಆಯ್ಕೆ, ಜುಲೈ 7ರಂದು ಅಧಿಕಾರ ಸ್ವೀಕಾರ