ಬೆಂಗಳೂರು : ರಾಜ್ಯದಲ್ಲಿ ಇದೀಗ ಭಾರಿ ಮಳೆಯಾಗುತ್ತಿದ್ದು, ಅನೇಕ ಜಿಲ್ಲೆಗಳಲ್ಲಿ ಮಳೆಯಿಂದ ಭಾರಿ ಅವಾಂತರ ಸೃಷ್ಟಿಯಾಗಿವೆ. ಇದೀಗ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರೀ ಗುಡುಗು, ಸಿಡಿಲು ಹಾಗೂ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹವಾಮಾನ ಇಲಾಖೆ ಎಚ್ಚರಿಕೆಯ ಅಲರ್ಟ್ ನೀಡಿದೆ.
ಹವಾಮಾನ ಇಲಾಖೆ ಮೈಸೂರು, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ಭಾರೀ ಗಾಳಿ ಮಳೆ ಹಾಗೂ ಗುಡುಗು ಸಿಡಿಲು ಅಪ್ಪಳಿಸುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಆಗಸ್ಟ್ 9 ರಂದು ಸಂಜೆ ಈ ಅಲರ್ಟ್ ನೀಡಿದ್ದು ರಾತ್ರಿಯವರೆಗೂ ಮುಂದುವರಿಯುವ ಸಾಧ್ಯತೆ ಇದೆ.
ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳುವಂತೆ, ಭಾರೀ ಗಾಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಆಗಸ್ಟ್ 9 ರಂದು ಸಂಜೆ 6 ಗಂಟೆಗೆ ಅಲರ್ಟ್ ನೀಡಿದೆ.ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಗುಡುಗು ಸಿಡಿಲು ಬಡಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.